ಎಲ್ಲರಿಗಿಂತ ಮುಂಚೆ ವೋಟ್‌ ಹಾಕಿದ ಹಿರಿಯ ನಟಿ ಲೀಲಾವತಿ!

masthmagaa.com:

ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಾನೇ ಇದೆ. ಫೇಮಸ್‌ ಆಕ್ಟರ್ಸ್‌ಗಳು ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ದರ್ಶನ್‌, ಸುದೀಪ್‌, ಶೃತಿ ಸೇರಿ ಹಲವಾರು ಜನ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಪ್ರಚಾರ ಮಾಡ್ತಾ ಇದಾರೆ. ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶವನ್ನ ಚುನಾವಣೆ ಆಯೋಗ ಕಲ್ಪಿಸಿದೆ. ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ ಸಹಾಯದಿಂದ ಅವರು ಮನೆಯಲ್ಲಿ ಮತದಾನ ಮಾಡಿದ್ದಾರೆ.

ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ “ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ” ಅಂತ ಹೇಳಿದ್ದಾರೆ. ಈ ಸಲ ಮತದಾನ ಮಾಡಿದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಚುನಾವಣೆ ಆಯೋಗ ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಇಂದು ಲೀಲಾವತಿ ಅವರು ಮತದಾನ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply