‘ಬೇಗ ಗುಣಮುಖರಾಗಿ ಬನ್ನಿ’.. ಬಿಜೆಪಿ ಚಾಣಕ್ಯನ ಚೇತರಿಕೆಗೆ ಪ್ರಾರ್ಥನೆ

masthmagaa.com:

ಕೇಂದ್ರ ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅತ್ಯಾಪ್ತ ಅಮಿತ್ ಶಾಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ 55 ವರ್ಷ ವಯಸ್ಸಿನ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ ತಮ್ಮ ಸಂಪರ್ಕಕ್ಕೆ ಬಂದವರು ಐಸೋಲೇಷನ್​ಗೆ ಒಳಗಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಅಮಿತ್ ಶಾ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಅಂತ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಹಲವರು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

-masthmagaa.com

Contact Us for Advertisement

Leave a Reply