ಭಾರತದ ಹಸಿರು ಕ್ರಾಂತಿ ಪಿತಾಮಹ ಎಂ.ಎಸ್‌ ಸ್ವಾಮಿನಾಥನ್‌ ಇನ್ನಿಲ್ಲ!

masthmagaa.com:

ಖ್ಯಾತ ಕೃಷಿ ವಿಜ್ಞಾನಿ ಹಾಗೂ ಭಾರತದ ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ಅವರು ನಿಧನರಾಗಿದ್ದಾರೆ. 98 ವರ್ಷದ ಸ್ವಾಮಿನಾಥನ್‌ ಇಂದು ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕೃಷಿತಜ್ಞ ಸ್ವಾಮಿನಾಥನ್ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಡಾ. ಎಂ.ಎಸ್. ಸ್ವಾಮಿನಾಥನ್ ನಿಧನಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಸ್ವಾಮಿನಾಥನ್‌ ಅವ್ರು 1960 ಮತ್ತು 1970ರ ದಶಕದಲ್ಲಿ ಭಾರತೀಯ ಕೃಷಿಯಲ್ಲಿ ಹೊಸ ಕ್ರಾಂತಿ ಸೃಷ್ಟಿ ಮಾಡಿದ್ದರು. ಹೆಚ್ಚು ಇಳುವರಿ ನೀಡುವ ಭತ್ತದ ತಳಿ ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದು ಭಾರತದ ಕಡಿಮೆ ಆದಾಯದ, ಕಡಿಮೆ ಭೂಮಿ ಹೊಂದಿರುವ ರೈತರು ಹೆಚ್ಚಿನ ಇಳುವರಿಯನ್ನು ಉತ್ಪಾದಿಸಲು ಸಹಾಯ ಮಾಡಿತು. ಈ ಕಾರಣಕ್ಕಾಗಿ, ಎಂಎಸ್ ಸ್ವಾಮಿನಾಥನ್ ಅವರನ್ನು ಭಾರತದ ಹಸಿರು ಕ್ರಾಂತಿಯ ಪಿತಾಮಹ ಅಂತ ಕರೆಯಲಾಗುತ್ತದೆ. ಹವಾಮಾನ ತಜ್ಞ, ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಸ್ವಾಮಿನಾಥನ್ ಅವರಿಗೆ 1971ರಲ್ಲಿ ರೇಮನ್ ಮ್ಯಾಗ್ನೆಸೆ, 1986ರಲ್ಲಿ ಅಲ್ಬರ್ಟ್ ಐನ್‌ಸ್ಟೀನ್ ವಿಶ್ವ ವಿಜ್ಞಾನ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮವಿಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳನ್ನ ನೀಡಿ ಗೌರವಿಸಲಾಗಿದೆ.

-masthmagaa.com

Contact Us for Advertisement

Leave a Reply