ಭಾರಿ ಮಳೆಗೆ ತತ್ತರಿಸಿದ ನ್ಯಾಯಾರ್ಕ್‌! ತುರ್ತು ಪರಿಸ್ಥಿತಿ ಘೋಷಣೆ!

masthmagaa.com:

ಪ್ರಕೃತಿ ವಿಕೋಪದ ಕರಿನೆರಳು ಈಗ ವಿಶ್ವದ ದೊಡ್ಡಣ್ಣ ಅಮೆರಿಕದ ಮೇಲೂ ಬೀಳ್ತಾ ಇದೆ. ನ್ಯೂಯಾರ್ಕ್‌ನಲ್ಲಿ ಭಾರಿ ಮಳೆ ಸುರಿತಿದ್ದು, ಪ್ರವಾಹ ಭೀತಿ ಉಂಟಾಗಿದೆ. ನಗರದಾದ್ಯಂತ ತುರ್ತು ಪರಿಸ್ಥತಿ ಘೋಷಿಸಲಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆಗಳು, ವಿಮಾನ ನಿಲ್ದಾಣಗಳು, ರೈಲ್ವೆ ಸುರಂಗ ಮಾರ್ಗಗಳಿಗೆ ನೀರು ನುಗ್ಗಿರುವ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ಸಂಬಂಧ ನ್ಯೂಯಾರ್ಕ್ ನಗರ, ಲಾಂಗ್ ಐಲ್ಯಾಂಡ್ ಮತ್ತು ಹಡ್ಸನ್‌ ವ್ಯಾಲಿಯಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇನ್ನು ನೀರು ತುಂಬಿರುವ ಕಾರಣ ವಿಮಾನ ನಿಲ್ದಾಣದ ಟರ್ಮಿನಲ್ ಒಂದನ್ನು ಮುಚ್ಚಲಾಗಿದೆ. ಸುಮಾರು 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ. ಜೊತೆಗೆ ರೈಲ್ವೆ ಸುರಂಗ ಮಾರ್ಗಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಕಾರುಗಳು ಸೇರಿದಂತೆ ಇತರೆ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ. ಹಲವೆಡೆ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ಅನಗತ್ಯವಾಗಿ ಹೊರಗೆ ಹೋಗದಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply