ಮುಂದಿನ 10 ದಿನ ರಾಜ್ಯದಲ್ಲಿ ಭಾರೀ ಮಳೆ! ಎಲ್ಲೆಲ್ಲಿ? ಇಲ್ನೋಡಿ.

masthmagaa.com:

ರಾಜ್ಯದ ಹಲವಡೆ ಇಂದು ಮಳೆಯಾಗಿದೆ. ಮುಂದಿನ 10 ದಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಅಂತ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಅಲ್ಲಲ್ಲಿ ಅತಿ ಹೆಚ್ಚು 244.4 ಮಿಲಿ ಮೀಟರ್ ಮಳೆಯೊಂದಿಗೆ ಕರಾವಳಿ ಜಿಲ್ಲೆಯಲ್ಲಿ 64 ಮಿ.ಮೀ ನಿಂದ 115 ಮಿ. ಮೀನಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹೇಳಿದೆ. ಜೊತೆಗೆ ಕರಾವಳಿ ಎಲ್ಲಾ ಜಿಲ್ಲೆಗಳ ಅಲ್ಲಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆರವಡಿ ಎಂಬಲ್ಲಿ ಅತಿಹೆಚ್ಚು 76 ಮಿಲಿ ಮೀಟರ್‌ ಮಳೆಯಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲೂ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

masthmagaa.com:

Contact Us for Advertisement

Leave a Reply