ರಾಜ್ಯದಲ್ಲಿ ಮುಂದುವರೆದ ಮಳೆ..! ಎಲ್ಲೆಲ್ಲಿ ನೋಡಿ

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಹರೇಕಳ ಎಂಬಲ್ಲಿ ಅತಿಹೆಚ್ಚು 181 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಬಹುತೇಕ ಕಡೆ ಭಾರಿ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೆಲವೊಂದು ಕಡೆ ಸಾಧಾರಣ, ಉಳಿದಂತೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡು ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧರಣ ಮಳೆ ಕೆಲವೊಂದು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

 

 

Contact Us for Advertisement

Leave a Reply