ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡ್ತಿರೋದು ನಿಜ! ಒಪ್ಪಿಕೊಂಡ ಸರ್ಕಾರ!

masthmagaa.com:

ರಾಜ್ಯದಲ್ಲಿ ವಿದ್ಯುತ್ ಅಭಾವ ತೀವ್ರಗೊಂಡಿದ್ದು, ರಾಜ್ಯ ಸರ್ಕಾರ ಸದ್ದಿಲ್ಲದೇ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿ ಮಾಡಿದೆ. ವಿದ್ಯುತ್ ಅಭಾವದ ನಡುವೆಯೂ ಎಲ್ಲಾ ಎಸ್ಕಾಂ ವಿದ್ಯುತ್‌ ಮಂಡಳಿಗಳು ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿವೆ. ಆದರೆ ರೈತರನ್ನ ಸಂಪೂರ್ಣ ಕಡೆಗಣಿಸಲಾಗಿದೆ ಅಂತ ಆರೋಪಿಸಲಾಗಿದೆ. ಗ್ರಾಮೀಣ ಭಾಗ ಮಾತ್ರವಲ್ಲದೇ ನಗರ ಪ್ರದೇಶಗಳಲ್ಲಿಯೂ ಲೋಡ್‍ಶೆಡ್ಡಿಂಗ್ ಶುರುವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಹಲವೆಡೆ ರೈತರು ಲೋಡ್‌ ಶೆಡ್ಡಿಂಗ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇತ್ತ ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್‌, ರಾಜ್ಯದಲ್ಲಿ ಬರಗಾಲ ಇರೋದ್ರಿಂದ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆ ಇರೋದ್ರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ ಅಂತ ಪರೋಕ್ಷವಾಗಿ ಲೋಡ್‌ ಶೆಡ್ಡಿಂಗ್‌ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಈ ವಿಚಾರದಲ್ಲಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಿದ್ದರು ಅನ್ನೋದನ್ನ ಹೇಳಲಿ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ್ಲೂ ಇದೇ ಪರಿಸ್ಥಿತಿ ನಿರ್ಮಾಣ ಆಗಿತ್ತು. ನಾವು ಆಗ 10 ಸಾವಿರದಿಂದ 13 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ವಿ. ಆದ್ರೆ ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ ಅಂತ ಹೇಳಿದ್ದಾರೆ. ಇನ್ನೊಂದ್‌ ಕಡೆ ಜಲಾಶಯಗಳಲ್ಲಿ ನೀರು ಕಡಿಮೆಯಾಗಿದ್ದು, ವಿದ್ಯುತ್‌ ಉತ್ಪಾದನೆ ಕುಸಿತ ಕಂಡಿದೆ. ಹೀಗಾಗಿ ಸ್ವಲ್ಪ ಲೋಡ್‌ ಶೆಡ್ಡಿಂಗ್‌ ಇದೆ ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply