masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,31,968 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 780 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 30 ಲಕ್ಷದ 60 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,67,642ಆಗಿದೆ.

ಕಳೆದ 24 ಗಂಟೆಗಳಲ್ಲಿ 61,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 19 ಲಕ್ಷದ 13 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 9 ಲಕ್ಷದ 79 ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 91.22ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.28 ಪರ್ಸೆಂಟ್ ಇದೆ. ಏಪ್ರೀಲ್‌ 8ರಂದು 13.64ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 25.40 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 36.91 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 9.43ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply