masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,61,736 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 879 ಸೋಂಕಿತರು ಮೃತಪಟ್ಟಿದ್ದಾರೆ. ಮಹರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ನಿನ್ನೆಗೆ ಹೋಲಿಸಿದರೆ ಸ್ವಲ್ಪ ಕಡಿಮೆ ಆಗಿದೆ. ಆದ್ರೆ ಮಹರಾಷ್ಟ್ರ ಸರ್ಕಾರ ಈ ವಾರದಲ್ಲಿ ಸಂಪೂರ್ಣ ಲಾಕ್‌ ಡೌನ್‌ ಘೋಷಿಸುವ ಸಾಧ್ಯತೆ ಇದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 36 ಲಕ್ಷದ 89 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,71,058ಆಗಿದೆ.

ಕಳೆದ 24 ಗಂಟೆಗಳಲ್ಲಿ 97,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 22 ಲಕ್ಷದ 53 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 12 ಲಕ್ಷದ 64 ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 89.51ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.25 ಪರ್ಸೆಂಟ್ ಇದೆ. ಏಪ್ರೀಲ್‌ 12ರಂದು 14.00ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 25.92 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 40.04 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 10.85ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply