ಬಿಹಾರ: ದೋಣಿ ಮುಳುಗಿ 10 ಮಕ್ಕಳು ನಾಪತ್ತೆ

masthmagaa.com:

ಬಿಹಾರದ ಮುಜಫ್ಫರ್‌ಪುರ ಜಿಲ್ಲೆಯ ಭಾಗಮತಿ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 10 ಮಕ್ಕಳು ಕಾಣೆಯಾಗಿರುವ ಘಟನೆ ನಡೆದಿದೆ. ದೋಣಿಯಲ್ಲಿ ಒಟ್ಟು 30 ಮಕ್ಕಳು ಶಾಲೆಗೆ ತೆರಳುತ್ತಿದ್ದರು ಅಂತ ತಿಳಿದು ಬಂದಿದೆ. ಅವರಲ್ಲಿ 20 ಮಕ್ಕಳನ್ನ ರಕ್ಷಿಸಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಮಾತಾಡಿರುವ ಬಿಹಾರ ಸಿಎಂ ನಿತೀಶ್‌ ಕುಮಾರ್‌, ರಕ್ಷಣಾ ಕಾರ್ಯ ನಡೆಸಲಾಗ್ತಿದ್ದು, ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಮಕ್ಕಳ ಕುಟುಂಬಳಿಗೆ ಅಗತ್ಯವಿರುವ ಎಲ್ಲಾ ನೆರವನ್ನ ಸರ್ಕಾರ ನೀಡಲಿದೆ ಅಂತ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply