masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 10,126 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 332 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 43 ಲಕ್ಷದ 77 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,61,389 ಆಗಿದೆ.

ಕಳೆದ 24 ಗಂಟೆಗಳಲ್ಲಿ 11,982 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 37 ಲಕ್ಷ 75 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 40 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.25 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 10.85 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 61.72 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 59.08 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 109.08 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply