masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 10,229 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 125 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 44 ಲಕ್ಷದ 47 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,63,655 ಆಗಿದೆ.

ಕಳೆದ 24 ಗಂಟೆಗಳಲ್ಲಿ11,926 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 38 ಲಕ್ಷದ 49 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 34 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.26 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.35 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 9.15 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 62.46 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 30.20 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 112.34 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply