masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,667 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಸತತ ಮೂರು ದಿನಗಳಿಂದ 11 ಸಾವಿರಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿತ್ತು. ಆ ಸಂಖ್ಯೆ ಈಗ 10 ಸಾವಿರಕ್ಕೆ ಇಳಿದಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,43,091 ಆಗಿದೆ. ಕಳೆದ 24 ಗಂಟೆಗಳಲ್ಲಿ 380 ಜನ ಮೃತಪಟ್ಟಿದ್ದು, ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 9,900 ಆಗಿದೆ.

ಒಂದೇ ದಿನ ದಾಖಲೆಯ 10,215‬ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಹುತೇಕ ಒಂದು ದಿನದಲ್ಲಿ ದೃಢಪಟ್ಟ ಪ್ರಕರಣಗಳಷ್ಟೇ ರೋಗಿಗಳು ಗುಣಮುಖ ಕೂಡ ಆಗಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 1,80,013 ಆಗಿದೆ. ವಿವಿಧ ಆಸ್ಪತ್ರೆಗಳಲ್ಲಿ 1,53,178 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಆ್ಯಕ್ಟಿವ್ ಪ್ರಕರಣಗಳ ಸಂಖ್ಯೆ ಕೇವಲ 72 ಮಾತ್ರ ಹೆಚ್ಚಳವಾಗಿದೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 1.10 ಲಕ್ಷ ದಾಟಿದೆ. ತಮಿಳುನಾಡಿನಲ್ಲಿ 46 ಸಾವಿರ, ದೆಹಲಿಯಲ್ಲಿ 42 ಸಾವಿರ ಮತ್ತು ಗುಜರಾತ್​ನಲ್ಲಿ 24 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply