masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 11,466 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 460 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 43 ಲಕ್ಷದ 88 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,61,849 ಆಗಿದೆ.

ಕಳೆದ 24 ಗಂಟೆಗಳಲ್ಲಿ 11,961 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 37 ಲಕ್ಷ 87 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 39 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.25 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 12.78 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 61.85 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 52.69 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 109.63 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply