masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,26,789 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 685 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 29 ಲಕ್ಷದ 28 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,66,862ಆಗಿದೆ.

ಕಳೆದ 24 ಗಂಟೆಗಳಲ್ಲಿ 59,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 18 ಲಕ್ಷದ 51 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 9 ಲಕ್ಷದ 10 ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 91.67ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.29 ಪರ್ಸೆಂಟ್ ಇದೆ. ಏಪ್ರೀಲ್‌ 7ರಂದು 12.37ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 25.26 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 29.79 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 9.01ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply