ವಿಶ್ವದಲ್ಲಿ ಕೊರೋನಾ ಹಾವಳಿ…ಎಲ್ಲೆಲ್ಲಿ ಎಷ್ಟು ಮಂದಿಗೆ ಸೋಂಕು..?

masthmagaa.com:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 508 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,789ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಗಳಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ ಅಂತ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನು ಮಹಾರಾಷ್ಟ್ರವೊಂದರಲ್ಲೇ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ.

ಇನ್ನು ವಿಶ್ವಮಟ್ಟದಲ್ಲಿ ನೋಡೋದಾದ್ರೆ, 14,50,000 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 82,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 3 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. ಅಮೆರಿಕವೊಂದರಲ್ಲೇ 4 ಲಕ್ಷ ಜನಕ್ಕೆ ಸೋಂಕು ತಗುಲಿದ್ದು, 12 ಸಾವಿರ ಮಂದಿ ಸಾವನ್ನಪ್ಪಿದ್ದಾರೆ.

-masthmagaa.com

Contact Us for Advertisement

Leave a Reply