ಇಬ್ಬರಿಂದ ಬಾಲಕಿ ರೇಪ್​​.. ನಾಲ್ವರಿಂದ ವಿಡಿಯೋ…

masthmagaa.com:

ದೇಶದಲ್ಲಿ ಲಾಕ್​ಡೌನ್ ಹೇರಲಾಗಿದ್ದು, ಅಪರಾಧಗಳ ಪ್ರಮಾಣ ಕಡಿಮೆಯಾಗಿದೆ. ಆದ್ರೆ ಉತ್ತರಪ್ರದೇಶದಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವಂತಹ ಘಟನೆ ವರದಿಯಾಗಿದೆ. ಇಲ್ಲಿನ ಸೀತಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಶೌಚಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದಳು. ಆದ್ರೆ ಈ ವೇಳೆ 6 ಮಂದಿ ಯುವಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದಿದ್ದಾರೆ.

ಬಳಿಕ ಇಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಉಳಿದ ನಾಲ್ವರು ದುಷ್ಟರು ಇದನ್ನು ವಿಡಿಯೋ ಮಾಡಿದ್ದಾರೆ. ಅಲ್ಲದೆ ಈ ವಿಚಾರವನ್ನು ಯಾರ ಬಳಿಯಾದರೂ ಬಾಯಿಬಿಟ್ಟರೆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ.

ಆದ್ರೆ ಬಾಲಕಿ ತನ್ನ ಮನೆಯಲ್ಲಿ ವಿಷಯ ತಿಳಿಸಿದ್ದಾಳೆ. ಪೋಷಕರ ದೂರಿನ ಅನ್ವಯ ಕೇಸ್ ದಾಖಲಿಸಿದ ಪೊಲೀಸರು, ಇಬ್ಬರು ಪ್ರಮುಖ ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಉಳಿದ ನಾಲ್ವರಿಗಾಗಿ ಬಲೆ ಬೀಸಿದ್ದಾರೆ.

-masthmagaa.com

Contact Us for Advertisement

Leave a Reply