masthmagaa.com:
ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 13,451 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 585 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 35 ಲಕ್ಷದ 97 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,55,653 ಆಗಿದೆ.
ಕಳೆದ 24 ಗಂಟೆಗಳಲ್ಲಿ 14,021 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 35 ಲಕ್ಷ 97 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 62 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಡೆಯುತ್ತಿದ್ದಾರೆ.
ಭಾರತದಲ್ಲಿ ಗುಣಮುಖ ಪ್ರಮಾಣ 98.19 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 13.05 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 60.32 ಕೋಟಿ ಟೆಸ್ಟ್ಗಳನ್ನ ನಡೆಸಿದಂತಾಗಿದೆ.
ದೇಶದಲ್ಲಿ ನಿನ್ನೆ 55.89 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 103.53 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.
-masthmagaa.com
Contact Us for Advertisement