ದೇಶದಲ್ಲಿ 24 ಗಂಟೆಗಳಲ್ಲಿ ಬರೋಬ್ಬರಿ 57 ಮಂದಿ ಬಲಿ..!

masthmagaa.com:

ಕೊರೋನಾ ವೈರಸ್​ಗೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 57 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದು ಈವರೆಗಿನ ಒಂದು ದಿನದ ಗರಿಷ್ಠ ಪ್ರಮಾಣದ ಸಾವಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 775ಕ್ಕೆ ಏರಿಕೆಯಾಗಿದೆ.

ಜೊತೆಗೆ ಕಳೆದ 24 ಗಂಟೆಗಳಲ್ಲಿ 1,429 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,506ರ ಗಡಿ ದಾಟಿದೆ. ಇದುವರೆಗೆ 5,063 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದ ವಿವಿಧ ಆಸ್ಪತ್ರೆಗಳಲ್ಲಿ 18,668 ಮಂದಿ ಕೊರೋನಾದಿಂದ ಬಳಲುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೋನಾ ಹಾವಳಿ ಮಿತಿಮೀರಿದ್ದು ಸೋಂಕಿತರ ಸಂಖ್ಯೆ 7 ಸಾವಿರ ಸನಿಹದಲ್ಲಿದೆ. ನಂತರದ ಸ್ಥಾನದಲ್ಲಿ ಗುಜರಾತ್, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಿವೆ. ಕರ್ನಾಟಕ 474 ಸೋಂಕಿತರೊಂದಿಗೆ 12ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply