masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,52,879 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 839 ಸೋಂಕಿತರು ಮೃತಪಟ್ಟಿದ್ದಾರೆ. ಭಾರತದಲ್ಲಿ ದಾಖಲಾದ ಒಟ್ಟು ಪ್ರಕರಣದಲ್ಲಿ ಶೇಕಡ 51.23ರಷ್ಟು ಪ್ರಕರಣ ಮಹರಾಷ್ಟ್ರ ಒಂದರಲ್ಲೆ ದಾಖಲಾಗಿದೆ. ಹಾಗಾಗಿ ಮಹರಾಷ್ಟ್ರದಲ್ಲಿ ಮತ್ತೊಮ್ಮೆ ಲಾಕ್‌ ಡೌನ್‌ ಆಗುವ ಸಾಧ್ಯತೆ ಹೆಚ್ಚಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 33 ಲಕ್ಷದ 58 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,69,275ಆಗಿದೆ.

ಕಳೆದ 24 ಗಂಟೆಗಳಲ್ಲಿ 90,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 20 ಲಕ್ಷದ 81 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 11 ಲಕ್ಷದ 08 ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 90.44ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.27 ಪರ್ಸೆಂಟ್ ಇದೆ. ಏಪ್ರೀಲ್‌ 10ರಂದು 14.12ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 25.66 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 35.19 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 10.15ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply