masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 15,906 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 561 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 41 ಲಕ್ಷದ 75 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,54,269 ಆಗಿದೆ.

ಕಳೆದ 24 ಗಂಟೆಗಳಲ್ಲಿ 16,479 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 35 ಲಕ್ಷ 48 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 72 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.17 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 13.40 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 59.97 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 77.40 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 102.10 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply