ದೇಶದಲ್ಲಿ ಕೊರೋನಾಗೆ ಮತ್ತಿಬ್ಬರು ಬಲಿ.. ಮೃತರ ಸಂಖ್ಯೆ 15ಕ್ಕೆ ಏರಿಕೆ

masthmagaa.com:

ದೇಶದಲ್ಲಿ ಕೊರೋನಾ ವೈರಸ್​ಗೆ ಮತ್ತಿಬ್ಬರು ಬಲಿಯಾಗಿದ್ದು ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 3 ದಿನಗಳ ಹಿಂದೆಯಷ್ಟೇ ಕೊರೋನಾ ಪಾಸಿಟಿವ್ ಬಂದಿದ್ದ ಕಾಶ್ಮೀರದ ಹೈದರ್​ಪೋರಾ ಗ್ರಾಮದ 65 ವರ್ಷದ ವೃದ್ಧ ಈ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಅಂತ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಕಣಿವೆಯಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾದಂತಾಗಿದೆ. ಜೊತೆಗೆ ಕಾಶ್ಮೀರದಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಇನ್ನು ಕೊರೋನಾ ವೈರಸ್​ಗೆ ನಲುಗಿ ಹೋಗಿರೋ ಮಹಾರಾಷ್ಟ್ರದಲ್ಲಿ ಮಾರ್ಚ್​ 24ರಂದು ಮೃತಪಟ್ಟ ಮುಂಬೈನ ಮಹಿಳೆಗೆ ಕೊರೋನಾ ಇದ್ದಿದ್ದು ಇದೀಗ ದೃಢಪಟ್ಟಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಅಲ್ಲದೆ 124 ಜನರಲ್ಲಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಇದುವರೆಗೆ 649 ಜನರಲ್ಲಿ ಕೊರೋನಾ ವೈರಸ್​ ದೃಢಪಟ್ಟಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಕರ್ನಾಟಕ 3ನೇ ಸ್ಥಾನದಲ್ಲಿದೆ.

-masthmagaa.com

 

Contact Us for Advertisement

Leave a Reply