ಬಳ್ಳಾರಿಯಲ್ಲಿ ಸ್ಫೋಟಕ ತಯಾರಿಕೆಗೆ ಅಮೋನಿಯಂ ನೈಟ್ರೇಟ್ ಖರೀದಿ!

masthmagaa.com:

ಬಳ್ಳಾರಿಯಲ್ಲಿ ಸ್ಫೋಟಕ ತಯಾರಿಕೆಗೆ ಅಮೋನಿಯಂ ನೈಟ್ರೇಟ್ ಖರೀದಿಸಿದ್ದ ಇಬ್ಬರು ಶಂಕಿತ ಉಗ್ರರನ್ನ ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳಾದ ಮೊಹಮ್ಮದ್ ಸುಲೇಮಾನ್ ಮತ್ತು ಸೈಯದ್ ಸಮೀರ್ ಅಕ್ಟೋಬರ್ 22 ರಂದು ಒಂದು ಕೆಜಿ ಅಮೋನಿಯಂ ನೈಟ್ರೇಟ್ ಖರೀದಿಸಿರುವುದಾಗಿ ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಅಂತ ತಿಳಿದು ಬಂದಿದೆ. ಅಂದ್ಹಾಗೆ ಬಂಧಿತರು ಐಸಿಸ್ ಭಯೋತ್ಪಾದಕ ಸಂಘಟನೆಗೆ ಸೇರುವಂತೆ ಯುವಕರನ್ನು ಪ್ರೇರೇಪಿಸಲು ಪ್ರಯತ್ನಿಸಿದ್ದರು ಅಂತ ತಿಳಿದು ಬಂದಿದೆ. ಗೊಬ್ಬರ ತಯಾರಿಕೆಯಲ್ಲಿ ವ್ಯಾಪಕವಾಗಿ ಬಳಸಲಾಗುವ ಅಮೋನಿಯಂ ನೈಟ್ರೇಟ್ ಅನ್ನು ಸ್ಫೋಟಕ ಏಜೆಂಟ್ ಆಗಿಯೂ ಬಳಸಬಹುದು ಹೀಗಾಗಿ ಬಂಧಿತರು ಇದನ್ನ ಖರೀದಿಸಿದ್ದರು ಎನ್ನಲಾಗಿದೆ.

-masthmagaa.com

Contact Us for Advertisement

Leave a Reply