masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,003 ಜನ ಸೋಂಕಿತರು ಮೃತಪಟ್ಟಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಈ ಪ್ರಮಾಣದ ಸೋಂಕಿತರು ಮೃತಪಟ್ಟಿರೋದು ಇದೇ ಮೊದಲು. ಕಳೆದ ಕೆಲ ದಿನಗಳಿಂದ ಪ್ರತಿದಿನ ಸುಮಾರು 300 ಜನ ಸಾವನ್ನಪ್ಪುತ್ತಿದ್ರು. ಆದ್ರೀಗ ಈ ಸಂಖ್ಯೆ 2 ಸಾವಿರ ಗಡಿ ದಾಟಿದೆ. ಮಹಾರಾಷ್ಟ್ರ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳು ಸಾವಿನ ಸಂಖ್ಯೆಯನ್ನ ಪರಿಷ್ಕರಿಸಿದ್ದೇ ಇದಕ್ಕೆ ಕಾರಣ.

ಇನ್ನು ಕಳೆದ 24 ಗಂಟೆಗಳಲ್ಲಿ 10,974 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಮೂರೂವರೆ ಲಕ್ಷ ದಾಟಿದ್ದು 3,54,065 ಆಗಿದೆ. ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 11,903 ಆಗಿದೆ.

ಒಂದೇ ದಿನ 6,922‬ ಜನ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,86,935 ಆಗಿದೆ. ವಿವಿಧ ಆಸ್ಪತ್ರೆಗಳಲ್ಲಿ 1,55,227 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಆ್ಯಕ್ಟಿವ್ ಪ್ರಕರಣಗಳ ಸಂಖ್ಯೆ 2,049 ಹೆಚ್ಚಳವಾಗಿದೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಒಟ್ಟು ಸೋಂಕಿತರ ಸಂಖ್ಯೆ 1.13 ಲಕ್ಷ ದಾಟಿದೆ. ತಮಿಳುನಾಡಿನಲ್ಲಿ 48 ಸಾವಿರ, ದೆಹಲಿಯಲ್ಲಿ 44 ಸಾವಿರ ಮತ್ತು ಗುಜರಾತ್​ನಲ್ಲಿ 24 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply