ಏಕದಿನ ಕ್ರಿಕೆಟ್‌ ವಿಶ್ವಕಪ್‌: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ

masthmagaa.com:

2023ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಆಯೋಜನೆ ಹಕ್ಕನ್ನ ಭಾರತ ಪಡೆದುಕೊಂಡಿದ್ದು, ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭಾರತದ ಆತಿಥ್ಯದಲ್ಲಿ ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 5 ರಿಂದ ಪಂದ್ಯಗಳು ಪ್ರಾರಂಭವಾಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ ಅಂತ ಮಾಹಿತಿ ಲಭ್ಯವಾಗ್ತಿದೆ. ಇದೇ ವೇಳೆ ಏಕದಿನ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಅಂತ ಹೇಳಲಾಗುತ್ತಿದೆ. ಭಾರತದಾದ್ಯಂತ ಒಟ್ಟು 13 ಸ್ಟೇಡಿಯಂಗಳಲ್ಲಿ ವಿಶ್ವಕಪ್‌ ಟೂರ್ನಿಯ ಪಂದ್ಯಗಳು ನಡೆಯಲಿವೆ ಎನ್ನಲಾಗಿದೆ. ಆದ್ರೆ ಈ ಬಗ್ಗೆ ಬಿಸಿಸಿಐ ಇನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಇನ್ನು ಐಪಿಎಲ್‌ ಮುಗಿದ ನಂತ್ರ ಬಿಸಿಸಿಐ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

-masthmagaa.com

Contact Us for Advertisement

Leave a Reply