ಬೆಂಗಳೂರಿನಲ್ಲಿ ಕೋವಿಡ್‌ಗೆ ಒಂದು ಬಲಿ! ದೇಶದಲ್ಲಿ 21 JN.1 ಕೇಸ್!

masthmagaa.com:

ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಜೋರಾಗಿಯೇ ಸೌಂಡ್‌ ಮಾಡ್ತಿದೆ. ರಾಜ್ಯದಲ್ಲಿ ಇದೀಗ ಮತ್ತೆ ಕೋವಿಡ್‌ನಿಂದ ಓರ್ವ ವ್ಯಕ್ತಿ ಮೃತಪಟ್ಟಿರೊ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ವೃದ್ಧ ಕೋವಿಡ್‌ ಸೋಂಕಿನಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆದ್ರೆ ಇವರಿಗೆ ಹೊಸ JN.1 ಸೋಂಕು ಬಂದಿರಲಿಲ್ಲ ಅಂತ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಇನ್ನು JN.1 ರೂಪಾಂತರಿಯ ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಗೋವಾದಲ್ಲಿ 18, ಮಾಹಾರಾಷ್ಟ್ರದಲ್ಲಿ ಹಾಗೂ ಕೇರಳದಲ್ಲಿ 1 ಕೇಸ್‌ ಪತ್ತೆಯಾಗಿದೆ. ಇತ್ತ ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 3 ಕೋವಿಡ್‌ ಸಂಬಂಧಿತ ಸಾವುಗಳು ದಾಖಲಾಗಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 614 ಹೊಸ ಕೊರೊನಾ ಕೇಸ್‌ಗಳು ವರದಿಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,311 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಮತ್ತೆ ಕೊರೊನಾ ಅಲೆ ಏಳುವ ವಾತಾವರಣ ಏದ್ದಿದ್ದು, ಕೇಂದ್ರ ಆರೋಗ್ಯ ಸಚಿವ ಮುನ್ಸುಖ್‌ ಮಾಂಡವೀಯ ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಈ ವೇಳೆ ಕೊರೊನಾವನ್ನ ಸಮರ್ಥವಾಗಿ ಎದುರಿಸೋಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಪ್ರಯತ್ನ ಮಾಡುವ ಅಗತ್ಯವಿದೆ ಅಂತ ಮಾಂಡವೀಯ ಹೇಳಿದ್ದಾರೆ. ಇನ್ನೊಂದ್‌ ಕಡೆ ಬೆಂಗಳೂರಿನಲ್ಲಿ ಸಾವಿನ ಪ್ರಕರಣ ದಾಖಲಾದ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್‌ ಆಗಿದೆ. ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳು ಸಭೆ ನಡೆಸಿದ್ದು, ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.

-masthmagaa.com

Contact Us for Advertisement

Leave a Reply