masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 22,431 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 318 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 38 ಲಕ್ಷದ 94 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,49,856 ಆಗಿದೆ.

ಕಳೆದ 24 ಗಂಟೆಗಳಲ್ಲಿ 24,602 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 32 ಲಕ್ಷ 00 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 44 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.95 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 14.31 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 57.86 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 43.09 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 92.63 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply