masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 27,254 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 219 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 32 ಲಕ್ಷದ 64 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,42,874 ಆಗಿದೆ.

ಕಳೆದ 24 ಗಂಟೆಗಳಲ್ಲಿ 37,687 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 24 ಲಕ್ಷ 47 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3 ಲಕ್ಷದ 74 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.54 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 12.08 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 54.30 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನ 53.38 ಲಕ್ಷಕ್ಕು ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 73.38 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply