ದೇಶದಲ್ಲಿಂದು 3.26 ಲಕ್ಷ ಜನರಿಗೆ ಕೊರೋನಾ… 3,890 ಜನ ಸಾವು!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 3,890 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿ 43 ಲಕ್ಷದ 72 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 2,66,207 ಆಗಿದೆ.

ಕಳೆದ 24 ಗಂಟೆಗಳಲ್ಲಿ 3.53 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 04 ಲಕ್ಷದ 32 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 36 ಲಕ್ಷದ 73 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 83.83% ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.09 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 16.93 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 31.30 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 11.03 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 18.04 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.
-masthmagaa.com

Contact Us for Advertisement

Leave a Reply