masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 4,000 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿ 40 ಲಕ್ಷದ 46 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 2,62,317 ಆಗಿದೆ.

ಕಳೆದ 24 ಗಂಟೆಗಳಲ್ಲಿ 3.44 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 00 ಲಕ್ಷದ 79 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 37 ಲಕ್ಷದ 04 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 83.50% ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.09 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 18.75 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 31.13 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 20.27 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 17.92 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply