masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,62,727 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 4,120 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿ 37 ಲಕ್ಷದ 03 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 2,58,317 ಆಗಿದೆ.

ಕಳೆದ 24 ಗಂಟೆಗಳಲ್ಲಿ 3.52 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 97 ಲಕ್ಷದ 34 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 37 ಲಕ್ಷದ 10 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 83.26% ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.09 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 18.64 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 30.94 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 18.94 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 17.72 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply