ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ.. ರಾಜನಾಥ್ ಸಿಂಗ್ ಸಭೆ

masthmagaa.com:

ಪೂರ್ವ ಲಡಾಖ್​ನ ಗಾಲ್ವಾನ್ ಪ್ರದೇಶದಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಚೀನಿ ಸೈನಿಕರ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ವೇಳೆ ಚೀನಾ ಯೋಧರು ಕೂಡ ಮೃತಪಟ್ಟಿದ್ದಾರೆ ಅಂತ ಹೇಳಲಾಗ್ತಿದೆ. 1975ರ ಬಳಿಕ ಭಾರತ-ಚೀನಾ ಗಡಿಯಲ್ಲಿ ನಡೆದ ಇಂತಹ ಮೊದಲ ಘಟನೆ ಇದಾಗಿದೆ. ಕಳೆದ ನಾಲ್ಕು ದಶಕಗಳಿಂದ ಭಾರತ ಚೀನಾ ಗಡಿಯಲ್ಲಿ ಒಂದೇ ಒಂದು ಗುಂಡು ಕೂಡ ಹಾರಿರಲಿಲ್ಲ.

ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಅಂತ ಸೇನಾ ಮೂಲಗಳು ಹೇಳಿವೆ. ಪರಿಸ್ಥಿತಿಯನ್ನ ಬಗೆಹರಿಸಿಕೊಳ್ಳಲು ಉಭಯ ದೇಶಗಳ ಉನ್ನತ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ.  ಇದರ ಬೆನ್ನಲ್ಲೇ ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಸಿಡಿಎಸ್​ ಬಿಪಿನ್ ರಾವತ್, ಮೂರು ಸೇನೆಗಳ ಮುಖ್ಯಸ್ಥರು ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಭಾರತೀಯ ಯೋಧರು ಚೀನಾ ಯೋಧರ ಮೇಲೆ ದಾಳಿ ನಡೆಸಿದ್ದಾರೆ ಅಂತ ಚೀನಾ ಆರೋಪಿಸಿದೆ. ಅಲ್ಲದೆ ಈ ಕುರಿತು ಏಕಪಕ್ಷೀಯ ನಿರ್ಧಾರ ಕೈಗೊಳ್ಳಬೇಡಿ ಮತ್ತು ತೊಂದರೆ ಉಂಟು ಮಾಡಬೇಡಿ ಅಂತ ಭಾರತಕ್ಕೆ ಚೀನಾ ಹೇಳಿದೆ.

-masthmagaa.com

Contact Us for Advertisement

Leave a Reply