masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 30,549 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 422 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 17 ಲಕ್ಷದ 26 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,25,195 ಆಗಿದೆ.

ಕಳೆದ 24 ಗಂಟೆಗಳಲ್ಲಿ 38,887 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 08 ಲಕ್ಷದ 96 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 04 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.38 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 16.49 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 47.12 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನ 61.09 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 47.85 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply