masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,502 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದರೊಂದಿಗೆ ಸತತ ಮೂರನೇ ದಿನವೂ 11 ಸಾವಿರಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಂತಾಗಿದೆ. ಮೊನ್ನೆ 11,458.. ನಿನ್ನೆ ದಾಖಲೆಯ 11,929.. ಇವತ್ತು 11,502.. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 3,32,424 ಆಗಿದೆ. ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ.

ಕಳೆದ 24 ಗಂಟೆಗಳಲ್ಲಿ 325 ಜನ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 9,520 ಆಗಿದೆ. ಇದುವರೆಗೆ 1,69,798 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,53,106 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 1.07 ಲಕ್ಷ ದಾಟಿದೆ. ತಮಿಳುನಾಡಿನಲ್ಲಿ 44 ಸಾವಿರ, ದೆಹಲಿಯಲ್ಲಿ 41 ಸಾವಿರ ಮತ್ತು ಗುಜರಾತ್​ನಲ್ಲಿ 23 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದ ಕರ್ನಾಟಕ 10ನೇ ಸ್ಥಾನಕ್ಕೆ ಹೋಗಿದೆ. ಹರಿಯಾಣ 9ನೇ ಸ್ಥಾನಕ್ಕೆ ಬಂದಿದೆ.

-masthmagaa.com

Contact Us for Advertisement

Leave a Reply