masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 34,403 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 320 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 33 ಲಕ್ಷದ 81 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,44,248 ಆಗಿದೆ.

ಕಳೆದ 24 ಗಂಟೆಗಳಲ್ಲಿ 37,950 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 25 ಲಕ್ಷ 98 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3 ಲಕ್ಷದ 39 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.65 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 15.27 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 54.92 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 63.97 ಲಕ್ಷಕ್ಕು ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 77.24 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply