masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 36,083 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 493 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 21 ಲಕ್ಷದ 92 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,31,225 ಆಗಿದೆ.

ಕಳೆದ 24 ಗಂಟೆಗಳಲ್ಲಿ 37,927 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 13 ಲಕ್ಷದ 76 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3 ಲಕ್ಷದ 85 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.46 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 19.23 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 49.36 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 73.50 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 54.38 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply