masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 37,154 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 724 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 08 ಲಕ್ಷದ 74 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,08,764 ಆಗಿದೆ.

ಕಳೆದ 24 ಗಂಟೆಗಳಲ್ಲಿ 39,649 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 00 ಲಕ್ಷದ 14 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 50 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.22 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.32 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 14.32 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 43.23 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 12.35 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 37.73 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply