masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,459 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ ದಾಖಲೆಯ 19,906 ಜನರಿಗೆ ಸೋಂಕು ತಗುಲಿತ್ತು. ಇವತ್ತು 19,459.. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 380 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 16,475 ಆಗಿದೆ. ಇದುವರೆಗೆ 3,21,723 ಜನ ಗುಣಮುಖರಾಗಿದ್ದಾರೆ. 2,10,120 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.64 ಲಕ್ಷ ದಾಟಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 83 ಸಾವಿರ, ತಮಿಳುನಾಡಿನಲ್ಲಿ 82 ಸಾವಿರ ಮತ್ತು ಗುಜರಾತ್​ನಲ್ಲಿ 31 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದ್ದ ಕರ್ನಾಟಕ 11ನೇ ಸ್ಥಾನಕ್ಕೆ ಬಂದಿದೆ.

ಜೂನ್ 28ರ ಫುಲ್ ನ್ಯೂಸ್: https://www.youtube.com/watch?v=wA9rO5d6Hsg

-masthmagaa.com

Contact Us for Advertisement

Leave a Reply