masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 39,361 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 416 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 14 ಲಕ್ಷದ 11 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,20,967 ಆಗಿದೆ.

ಕಳೆದ 24 ಗಂಟೆಗಳಲ್ಲಿ 35,968 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 05 ಲಕ್ಷದ 79 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 11 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.35 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 11.54 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 45.74 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನ 18.99 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 43.51 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply