ಚೀನಾವನ್ನೇ ಮೀರಿಸಿದ ಭಾರತ.. ದೇಶದಲ್ಲಿ 85 ಸಾವಿರ ಸೋಂಕಿತರು..!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,970 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 103 ಜನ ಪ್ರಾಣ ಕಳೆದುಕೊಂಡಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85,940ಕ್ಕೆ ಏರಿಕೆಯಾಗಿದೆ.

ಇದುವರೆಗೆ 2,752 ಮಂದಿ ಕೊರೋನಾಗೆ ಸಂಬಂಧಿಸಿದಂತೆ ಪ್ರಾಣ ಕಳೆದುಕೊಂಡಿದ್ದಾರೆ. 30,153 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದ ವಿವಿಧ ಆಸ್ಪತ್ರೆಗಳಲ್ಲಿ 53,035‬ ಮಂದಿ ಕಾಯಿಲೆ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ದೇಶದಲ್ಲಿರುವ ಆ್ಯಕ್ಟಿವ್ ಪ್ರಕರಣಗಳಾಗಿವೆ.

ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 29 ಸಾವಿರ ದಾಟಿದ್ದು, ಒಂದೇ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ. ಗುಜರಾತ್, ದೆಹಲಿ ಮತ್ತ ರಾಜಸ್ಥಾನ ನಂತರದ ಸ್ಥಾನದಲ್ಲಿವೆ. ಈ ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ.

ಈ ಮೂಲಕ ಕಾಯಿಲೆಯ ತವರು ಚೀನಾವನ್ನು ಮೀರಿಸಿದಂತಾಗಿದೆ ಭಾರತ. ಚೀನಾದಲ್ಲಿ ಇದುವರೆಗೆ 82,941 ಜನರಿಗೆ ಸೋಂಕು ತಗುಲಿದ್ದು, 4,633 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 78,219 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಚೀನಾದಲ್ಲಿ. ಚೀನಾಗೆ ಹೋಲಿಸಿದ್ರೆ ಭಾರತದಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ.

-masthmagaa.com

Contact Us for Advertisement

Leave a Reply