masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,12,262 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 3,980 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿ 10 ಲಕ್ಷದ 77 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 2,30,168 ಆಗಿದೆ.

ಕಳೆದ 24 ಗಂಟೆಗಳಲ್ಲಿ 3.29 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 72 ಲಕ್ಷದ 80 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 34 ಲಕ್ಷದ 87 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 82.03% ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.09 ಪರ್ಸೆಂಟ್ ಇದೆ. ಏಪ್ರೀಲ್‌ 04 ರಂದು 19.23 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 29.67 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 19.55 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 16.25 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.
-masthmagaa.com

Contact Us for Advertisement

Leave a Reply