ಕರ್ನಾಟಕದಲ್ಲಿ ನಾಲ್ವರಿಗೆ ಕೊರೋನಾ ಸೋಂಕು: ರಾಮುಲು ಟ್ವೀಟ್​​

ಭಾರತಕ್ಕೆ ಬಂದಿರೋ ಕೊರೋನಾ ವೈರಸ್ ಈಗ ರಾಜ್ಯಕ್ಕೂ ಬಂದಿದೆ. ಬೆಂಗಳೂರಿನಲ್ಲಿ ನಿನ್ನೆ ಒಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ ಅಂತ ಹೇಳಲಾಗಿತ್ತು. ಆದ್ರೀಗ ರಾಜ್ಯದಲ್ಲಿ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ ಅಂತ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, ಕರ್ನಾಟಕದಲ್ಲಿ ಈವರೆಗೆ 4 ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗ್ರತಾ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ ಎಂದಿದ್ದಾರೆ. 

Contact Us for Advertisement

Leave a Reply