ತಮಿಳುನಾಡಿಗೆ 4 ಪಟ್ಟು ಅಧಿಕ ನೀರಿ ಬಿಡುಗಡೆ!

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಆನೆಕಲ್‌ ತಾಲೂಕಿನ ಸಮಂದೂರು ಎಂಬಲ್ಲಿ ಅತಿ ಹೆಚ್ಚು 126 ಮಿಲಿಮೀಟರ್ ಮಳೆಯಾಗಿದೆ. ಇನ್ನು ನಿನ್ನೆ ಸಂಜೆಯಿಂದ ಎಡಬಿಡದೇ ಸುರಿದ ಮಳೆಯಿಂದ ಬೆಂಗಳೂರಿನ ಅಂಡರ್‌ಪಾಸ್‌ಗಳು, ರಸ್ತೆಗಳು ಜಲಾವೃತಗೊಂಡಿವೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆಸಾಧಾರಣ ಮಳೆ ಹಾಗೂ ಕೆಲವು ಕಡೆ ಅಧಿಕ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ಯಾವುದೇ ಜಿಲ್ಲೆಗೂ ಅಲರ್ಟ್ ಘೋಷಿಸಿಲ್ಲ. ಇನ್ನೊಂದ್‌ ಕಡೆ ರಾಜ್ಯದ ಕಾವೇರಿ ಕಣಿವೆಯಲ್ಲಿ ಭರ್ಜರಿ ಮಳೆಯಾಗಿದ್ರಿಂದ ತಮಿಳುನಾಡಿಗೆ ನಿಗಧಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆಯಾಗಿದೆ. ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಈ ಅವಧಿಯಲ್ಲಿ 101 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ 452.5 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. 1974ರ ನಂತರ ಇದೇ ಮೊದಲ ಬಾರಿಗೆ ಅತ್ಯಧಿಕ ಪ್ರಮಾಣದಲ್ಲಿ ತಮಿಳುನಾಡಿಗೆ ನೀರನ್ನ ಬಿಡುಗಡೆ ಮಾಡಲಾಗಿದೆ ಅಂತ ಹೇಳಲಾಗಿದೆ.

-masthmagaa.com

Contact Us for Advertisement

Leave a Reply