ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಕೊರತೆ!

masthmagaa.com:

ರಾಜ್ಯದಲ್ಲಿ ಈ ವರ್ಷ ಅಷ್ಟಾಗಿ ವರುಣ ಕೃಪೆ ತೋರಿಲ್ಲ. ವಾಡಿಕೆಯಂತೆ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್‌ ತಿಂಗಳಲ್ಲಿ ಭಾರಿ ಮಳೆಯಾಗಬೇಕಿತ್ತು. ಆದ್ರೆ ಈ ಬಾರಿ ಮಳೆ ಕೊರತೆ ಉಂಟಾಗಿದ್ದು, ಒಣ ಹವೆ ವಾತಾವರಣವಿದೆ. ಬೆಂಗಳೂರು ಬಿಸಿಲಿನ ತಾಪದಿಂದ ತತ್ತರಿಸುತ್ತಿದೆ. ಈ ತಿಂಗಳು ಶೇಕಡ 40ಕ್ಕಿಂತ ಹೆಚ್ಚು ಮಳೆಯ ಕೊರತೆ ಇದ್ದು, ಬಿಸಿಲಿನ ತಾಪ ಹೆಚ್ಚುತ್ತಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಮುಂದಿನ ವಾರವೂ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಮುಂದುವರಿಯಲಿದೆ ಅಂತ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂದ್ಹಾಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಇಲಾಖೆ ಅಂಕಿ ಅಂಶಗಳ ಪ್ರಕಾರ, ಆಗಸ್ಟ್ ಮೊದಲ ವಾರದಲ್ಲಿ 24.3 ಮಿಮೀ ಸಾಮಾನ್ಯ ಮಳೆಯಾಗಿದ್ದು, ಬೆಂಗಳೂರು ನಗರದಲ್ಲಿ ಕೇವಲ 10.8 ಮಿಮೀ ಮಳೆಯಾಗಿದೆ.

-masthmagaa.com

Contact Us for Advertisement

Leave a Reply