masthmagaa.com:

ಕೊರೋನಾದ ಎರಡನೇ ಅಲೆ ಏಳುತ್ತಿರುವ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 40,953 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ನವೆಂಬರ್‌ 29 ಅಂದ್ರೆ ಕಳೆದ 4ತಿಂಗಳಲ್ಲಿಯೇ ದಾಖಲಾದ ಅತೀ ಹೆಚ್ಚು ಪ್ರಕರಣ ಇದಾಗಿದೆ. ಉಳಿದಂತೆ ಕಳೆದ 24 ಗಂಟೆಯಲ್ಲಿ 188 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 15ಲಕ್ಷದ 55ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,59,558ಆಗಿದೆ.

ಕಳೆದ 24 ಗಂಟೆಗಳಲ್ಲಿ 23,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 11ಲಕ್ಷದ 07ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 88 ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.12 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.38 ಪರ್ಸೆಂಟ್ ಇದೆ. ಮಾರ್ಚ್‌ 20 ರಂದು 10.60 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 23.24ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 27.23ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 4.20 ಕೋಟಿ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply