masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 41,157 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 518 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 11 ಲಕ್ಷದ 06 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,13,609 ಆಗಿದೆ.

ಕಳೆದ 24 ಗಂಟೆಗಳಲ್ಲಿ 42,004 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 02 ಲಕ್ಷದ 69 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 22 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.31 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 19.36 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 44.39 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 51.01 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 40.49 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply