masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 42,982 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 533 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 18 ಲಕ್ಷದ 12 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,26,290 ಆಗಿದೆ.

ಕಳೆದ 24 ಗಂಟೆಗಳಲ್ಲಿ 41,726 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 09 ಲಕ್ಷದ 74 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 11 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.37 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 16.64 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 47.48 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನ 37.55 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 48.93 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply