masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,082 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 492 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 93.09 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,35,715 ಆಗಿದೆ.

ಕಳೆದ 24 ಗಂಟೆಗಳಲ್ಲಿ 39,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 87.18 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4.55 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ಗುಣಮುಖ ಪ್ರಮಾಣ 93.65% ಇದ್ದು, ಸಾವಿನ ಪ್ರಮಾಣ 1.46% ರಷ್ಟಿದೆ. ನವೆಂಬರ್‌ 26ರಂದು 11.31 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 13.70 ಕೋಟಿ ಕೊರೋನಾ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply