masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 45,951 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 817 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 03 ಲಕ್ಷದ 62 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3,98,454 ಆಗಿದೆ.

ಕಳೆದ 24 ಗಂಟೆಗಳಲ್ಲಿ 60,729 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 94 ಲಕ್ಷದ 27 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5 ಲಕ್ಷದ 37 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.92 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.31 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 19.60 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 41.01 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 36.51 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 33.28 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply