ಕೊರೋನಾ ತವರು ಚೀನಾದಲ್ಲಿ ಮತ್ತೆ ಹೊಸ ಪ್ರಕರಣಗಳು ಪತ್ತೆ..!

masthmagaa.com:

ಕೊರೋನಾ ವೈರಸ್ ಮೊದಲು ಕಾಣಿಸಿಕೊಂಡ ಚೀನಾದಲ್ಲಿ ಹೊಸದಾಗಿ 46 ಜನರಲ್ಲಿ ಸೋಂಕು ಪತ್ತೆಯಾಗಿದೆ ಅಂತ ಚೀನಾದ ನ್ಯಾಷನಲ್ ಹೆಲ್ತ್ ಕಮಿಷನ್ ಹೇಳಿದೆ. ಇದರಲ್ಲಿ 42 ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ದೃಢಪಟ್ಟಿದೆ. ಅಲ್ಲದೆ ರೋಗ ಲಕ್ಷಣ ಕಾಣಿಸಿಕೊಳ್ಳದ 34 ಪ್ರಕರಣಗಳು ಕೂಡ ಬೆಳಕಿಗೆ ಬಂದಿವೆ.

ಕಳೆದ 24 ಗಂಟೆಗಳಲ್ಲಿ 3 ಮಂದಿ ಪ್ರಾಣ ಕಳೆದುಕೊಂಡಿದ್ದು, ಬಲಿಯಾದವರ ಸಂಖ್ಯೆ 3,339ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ 81,953ಕ್ಕೆ ಬಂದು ನಿಂತಿದೆ ಅಂತ ಸರ್ಕಾರ ತಿಳಿಸಿದೆ. ಶುಕ್ರವಾರ ಒಂದೇ ದಿನ 70 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಈ ಮೂಲಕ ಚೀನಾದಲ್ಲಿ ಈ ಕಾಯಿಲೆಯಿಂದ ಗುಣಮುಖರಾದವರ ಸಂಖ್ಯೆ 77,525ಕ್ಕೆ ಏರಿಕೆಯಾಗಿದೆ.

ಕಳೆದ ಡಿಸೆಂಬರ್​ನಲ್ಲಿ ಚೀನಾದ ವುಹಾನ್​ನಲ್ಲಿ ಕಾಣಿಸಿಕೊಂಡ ಕೊರೋನಾ ವೈರಸ್ ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿದೆ. ಇದುವರೆಗೆ ಒಂದು ಲಕ್ಷಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದು, 17 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ.

-masthmagaa.com

Contact Us for Advertisement

Leave a Reply